ಸರ್ಕಾರಿ ನಿವೃತ್ತ ನೌಕರರ ಸಂಘದ ಡಿ.29ರಂದು

Published on

ಹಾವೇರಿ: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಪ್ರಸಕ್ತ ಸಾಲಿನ ವಾರ್ಷಿಕ ಸಭೆ ಹಾಗೂ ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ ಸಮಾರಂಭ ಡಿ.29ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಅಶ್ವಿನಿ ನಗರದ ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸಭೆಯನ್ನು ಶಾಸಕ ರುದ್ರಪ್ಪ ಲಮಾಣಿ ಉದ್ಘಾಟಿಸಲಿದ್ದಾರೆ. ಜಿಎಚ್ ಕಾಲೇಜ್ ಉಪನ್ಯಾಸಕ ಡಾ.ಜಿ.ವಿ.ಸಾಲಿಮಠ ಅತಿಥಿಯಾಗಿ ಭಾಗವಹಿಸುವರು. ಸಂಘದ ಸದಸ್ಯರು ಸಭೆಗೆ ಹಾಜರಾಗಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ.ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net