ಹಾವೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಜೂ.26ರಂದು ಬೆಳಗ್ಗೆ 10.30ಕ್ಕೆ ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಜಿಲ್ಲಾ ಮಾಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ನವೋವೈದ್ಯ ಡಾ.ವಿಜಯಕುಮಾರ ಬಿ. ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಮಾನಸಿಕ ರೋಗದ ಲಕ್ಷಣಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.
ಹಿರಿಯ ದಿವಾಣಿ ನ್ಯಾಯಾಧೀಶ ಪುಟ್ಟರಾಜು ಉದ್ಘಾಟಿಸಲಿದ್ದು, ಪ್ರಾಂಶುಪಾಲ ಡಾ.ಜಗದೀಶ ಕೋರಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪಿ.ಸಿ.ಬಣಕಾರ, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.