ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

Published on

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ‘ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು’ ಎಂಬ ವಿಷಯದ ಬಗ್ಗೆ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ.
ಈ ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಅಭ್ಯರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಜಿಲ್ಲಾಧಿಕಾರಿಯವರಿಂದ ವಿತರಿಸಲಾಗುವುದು.
ಆಸಕ್ತರು ಮೇಲ್ಕಂಡ ವಿಷಯದ ಚಿತ್ರಕಲೆ ಬಿಡಿಸಿ ಕಡ್ಡಾಯವಾಗಿ ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ವಿವರೊಂದಿಗೆ ಜೂನ್ 22ರೊಳಗಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕ, ಎ ಬ್ಲಾಕ್, 3ನೇ ಮಹಡಿ, ಕೊಠಡಿ ಸಂಖ್ಯೆ 15, ಜಿಲ್ಲಾಡಳಿತ ಭವನ, ದೇವಗಿರಿ, ಹಾವೇರಿ ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net