ಹಾವೇರಿ: ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾಸ್ಪತ್ರೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮೇ 31ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಸ್ಪತ್ರೆ ಆವರಣದಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮ ಹೊರಡಲಿದೆ.
ಪ್ರಧಾನ ವ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ.ಸದಾನಂದಸ್ವಾಮಿ ಉದ್ಘಾಟನೆ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಸಿಜೆಎಂ ಪ್ರಕಾಶ ವಿ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ.ಜಗದೀಶ ಪಾಟೀಲ, ಜಿಲ್ಲಾ ಎನ್.ಒ.ಎಚ್.ಪಿ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಕಲ್ಪನಾ, ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಶೂಶ್ರುಷಕ ತರಬೇತಿ ಕೇಂದ್ರದ ಪ್ರಾಂಶುಪಾಲೆ ಸರಸ್ವತಿ ವೈ.ಎಚ್. ಪಾಲ್ಗೊಳ್ಳಲಿದ್ದಾರೆ.