ಚಿನ್ನಾಭರಣ ಮರಳಿಸಿದ ಬಸ್ ನಿರ್ವಾಹಕ, ಚಾಲಕ; ಪ್ರಾಮಾಣಿಕತೆ ಮೆರೆದ ಸಿಬ್ಬಂದಿ ನರೇಂದ್ರಕುಮಾರ, ವಿಜಯಸಿಂಗ್

10 HVR 4
Published on

ಹಾವೇರಿ: ವಾಕರಸಾ ಸಂಸ್ಥೆಯ ಸಾರಿಗೆ ಬಸ್ ಒಂದರಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ 20 ಗ್ರಾಂ ಚಿನ್ನದ ಆಭರಣಗಳನ್ನು ಮಹಿಳೆಗೆ ಮರಳಿಸುವ ಮೂಲಕ ಬಸ್ ಚಾಲಕ, ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.

ನಿರ್ವಾಹಕ ನರೇಂದ್ರಕುಮಾರ ಹಾಗೂ ಚಾಲಕ ವಿಜಯಸಿಂಗ್ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ.

ಅ.5ರಂದು ಹಾವೇರಿ ಘಟಕದ ಕೆಎ 27, 0900 ಬಸ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿತ್ತು. ಶಿಗ್ಗಾಂವಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಮ್ಮ ಚಿನ್ನಾಭರಣ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ನಿರ್ವಾಹಕ ಹಾಗೂ ಚಾಲಕರು ಹಾವೇರಿಯ ಕೇಂದ್ರೀಯ ಬಸ್ ನಿಲ್ದಾಣದ ನಿಲ್ದಾಣಾಧಿಕಾರಿ ಕೆ.ಎಂ.ಲಮಾಣಿ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಚಿನ್ನಾಭರಣ ಕಳೆದುಕೊಂಡಿದ್ದ ಜಾಕಿಯಾ ಸೌದಾಗಾರ ಎಂಬ ಮಹಿಳೆಯನ್ನು ಸಂಪರ್ಕಿಸಿ, ಹಾವೇರಿ ವಿಭಾಗೀಯ ಕಚೇರಿಯಲ್ಲಿ ಇತ್ತೀಚೆಗೆ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಜೆ. ಹಾಗೂ ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ ಪಾಟೀಲರ ಮೂಲಕ ಮಹಿಳೆಗೆ ಮರಳಿಸಿದರು. ಕರ್ತವ್ಯದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆ ತೋರಿದ ಚಾಲಕ ಹಾಗೂ ನಿರ್ವಾಹಕರನ್ನು ವಿಭಾಗೀಯ ನಿಯಂತ್ರಣಾಧಿಕಾರಿ ಸನ್ಮಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net