ಒನಕೆ ಓಬವ್ವ ಜಯಂತಿ ಆಚರಣೆ 14ರಂದು

Published on

ಹಾವೇರಿ: ನಗರದಲ್ಲಿ ಡಿ.14ರಂದು ಜಿಲ್ಲಾ ಮಟ್ಟದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.14ರಂದು ಬೆಳಗ್ಗೆ 9 ಗಂಟೆಗೆ ಪುರಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

ಮೆರವಣಿಗೆಗೆ ಕಲಾ ತಂಡ, ಪೊಲೀಸ್ ಬಂದೋಬಸ್ತ್, ವೇದಿಕೆ, ಆಸನ, ಕುಡಿಯುವ ನೀರು, ಆಮಂತ್ರಣಪತ್ರಿಕೆ, ಉಪಹಾರ, ಉಪನ್ಯಾಸಕ ಆಯ್ಕೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ ಕಾರ್ಯಕ್ರಮದ ರೂಪರೇಷೆಗಳ ಕುರಿತು ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net