ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ, ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ, ವಿಶೇಷ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆಗಳು, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಬಿ ಸಾರಥಿ ಯೋಜನೆ ಸ್ವಯಂ ಉದ್ಯೋಗ ಸಾಲ ಯೋಜನೆಗಳಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಕೌಶಲ ಕರ್ನಾಟಕ ತಂತ್ರಾಂಶದಲ್ಲಿ ಅ.30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಠಿಠಿ://ಡ್ಚಛ್ಚ.ಚ್ಟ್ಞಠಿ.ಜಟ.ಜ್ಞಿ ಜಾಲತಾಣ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಕಚೇರಿ ಸಂಪರ್ಕಿಸಬಹುದೆಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net