

ಹಾವೇರಿ: ದೇಶದ ಭದ್ರತೆ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದ ಪಾಕಿಸ್ತಾನ ಸೇರಿದಂತೆ ಜಗತ್ತಿಗೆ ಭಾರತದ ಶಕ್ತಿ ಏನು ಎಂಬ ಅರಿವಾಗಿದೆ. ಭಾರತದ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ಭಾರತೀಯ ಸೈನ್ಯ ಕೊಟ್ಟಿದೆ.
ಭಾರತೀಯ ಸೈನ್ಯ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಅಡಗುತಾಣಗಳನ್ನು ದ್ವಂಸ ಮಾಡಿ, ನೂರಾರು ಉಗ್ರರಿಗೆ ನರಕ ದರ್ಶನ ಮಾಡುವ ಮೂಲಕ ಕಾಶ್ಮೀರದ ಪಹಲ್ಗಾಮ ದಾಳಿಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದೆ. ಜಮ್ಮು ಮತ್ತು ಕಾಶ್ಮೀರ ಭಾರತ ಮಾತೆಯ ಸಿಂಧೂರ ಎಂಬುದನ್ನು ಭಾರತ ಮತ್ತೆ ಮತ್ತೆ ಜಗತ್ತಿಗೆ ಸಾರಿ ಹೇಳಿದೆ. ಈ ಕಾರ್ಯಾಚರಣೆ ನಿಜಕ್ಕೂ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೇ ಉಳಿಯಲಿದೆ ಎಂದು ಹಾವೇರಿ ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಿ. ಹಾವೇರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.