ಹಾವೇರಿ: ಬೆಂಗಳೂರು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಸಿಡಾಕ್ ಸಂಸ್ಥೆಯಿಂದ ಸ್ವಯಂಉದ್ಯೋಗ ಕೈಗೊಳ್ಳಲು ಇಚ್ಛಿಸುವ ಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಜುಲೈ ಕೊನೆಯ ವಾರದಲ್ಲಿ ಹಾವೇರಿಯಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ ಆಯೋಜಿಸಲಾಗುವುದು.
ಸ್ವಂತ ಉದ್ಯಮ ಸ್ಥಾಪಿಸಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪೋತ್ಸಾಹ, ಉದ್ಯಮಶೀಲತಾಭಿವೃದ್ಧಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಅಭ್ಯರ್ಥಿಯು 18 ವರ್ಷ ಪೂರ್ಣಗೊಂಡ ಮಹಿಳೆಯಾಗಿರಬೇಕು. ಓದಲು ಬರೆಯಲು ಬರಬೇಕು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗದ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಕಚೇರಿ ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್ ಜಿಲ್ಲಾ ಕೈಗಾರಿಕಾ ಕೇಂದ್ರ, ನಂ.24 ಬಿ ಬ್ಲಾಕ್, ಜಿಲ್ಲಾಡಳಿತ ಭವನ ದೇವಗಿರಿ, ಹಾವೇರಿ ಇಲ್ಲಿಗೆ ಸಂಪರ್ಕಿಸಬಹುದು.