ಆಕ್ಸ್‌ಫರ್ಡ್ ಕಾಲೇಜ್ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ

Oxferd
Published on

ಹಾವೇರಿ: ನಗರದ ಆಕ್ಸಫರ್ಡ್ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ 2023-24ನೇ ಸಾಲಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಸಿ.ಇಟಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಒಕ್ಕೂಟದ ಉದ್ಘಾಟನಾ ಸಮಾರಂಭ ಜರುಗಿತು.
ಡಾ.ಚಿನ್ಮಯ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ರೂಢಿಸಿಕೊಳ್ಳಬೇಕು. ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಾಧನೆಯ ಶಿಖರ ಏರಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿ ಒಕ್ಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ನೀಡಲಾಯಿತು.
ಕಾಲೇಜ್ ಸಂಸ್ಥಾಪಕ ಪ್ರೊ.ಪ್ರಶಾಂತಕುಮಾರ ಬೆನ್ನೂರ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ವೀರೇಶ ಹಿತ್ತಲಮನಿ, ಪ್ರೊ.ರಾಜಕುಮಾರ ತಳವಾರ, ಪ್ರೊ.ರಾಜು ಪಿ. ಉಪನ್ಯಾಸಕರು, ವಿದ್ಯಾರ್ಥಿಗಳು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net