ಯರೇಸೀಮಿ ಬಂಧನಕ್ಕೆ ಸಚಿವರ ಆದೇಶ; ರಾಣೆಬೆನ್ನೂರ ಸಂತ್ರಸ್ತರ ಕುಟುಂಬಕ್ಕೂ ಪರಿಹಾರಕ್ಕೆ ಕ್ರಮ

4 HVR 6 A
Published on

ಹಾವೇರಿ: ಆಲದಕಟ್ಟಿ ಪಟಾಕಿ ದುರಂತದ ಪ್ರಮುಖ ಆರೋಪಿಗಳಲ್ಲೊಬ್ಬನಾದ ಹಾವೇರಿಯ ವಿಜಯ ಯರೇಸೀಮಿಯನ್ನು ಯಾವುದೇ ಪರಿಸ್ಥಿತಿಯಲ್ಲಿ ಬಂಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ಗುಣಾರೆ ಅವರಿಗೆ ಆದೇಶಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಲೆಮರೆಸಿಕೊಂಡ ಆರೋಪಿ ಪತ್ತೆ ಕುರಿತು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದ್ದೇನೆ. ರಾಣೆಬೆನ್ನೂರ ಸ್ಪಾರ್ಕಲ್ ಕ್ಯಾಂಡಲ್ ಫ್ಯಾಕ್ಟರಿ ದುರಂತದಲ್ಲಿ ಮೃತಪಟ್ಟ ಇಬ್ಬರ ಕುಟುಂಬದವರಿಗೆ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಪರಿಹಾರ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net