ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಸಭೆ 17ರಂದು

Published on

ಹಾವೇರಿ: ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಜಿಲ್ಲಾ ಘಟಕದ ವತಿಯಿಂದ ಆ.17ರಂದು ಮಧ್ಯಾಹ್ನ 3 ಘಂಟೆಗೆ ನಗರದ ನಿರೀಕ್ಷಣಾ ಮಂದಿರದಲ್ಲಿ (ಐಬಿ) ಜಿಲ್ಲಾ ಮಟ್ಟದ ಪತ್ರಿಕಾ ವಿತರಕರ ಸಭೆ ಕರೆಯಲಾಗಿದೆ.
ಒಕ್ಕೂಟದ ಜಿಲ್ಲಾಧ್ಯಕ್ಷ ಸಂಕಪ್ಪ ಮಾರನಾಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಚಿತ್ರದುರ್ಗದಲ್ಲಿ ನಡೆಯಲಿರುವ 4ನೇ ವಿಶ್ವ ಪ್ರತಿಕಾ ವಿತರಕರ ದಿನಾಚರಣೆ ಸಮಾವೇಶದ ಪ್ರವಾಸ ಹಾಗೂ ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಎಲ್ಲ ಜಿಲ್ಲಾ ಹಾಗೂ ತಾಲೂಕು ಕಮಿಟಿಗಳ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಭೆಗೆ ಹಾಜರಾಗಿ, ತಮ್ಮ ಸಲಹೆ, ಸೂಚನೆಗಳನ್ನು ಸೂಚಿಸಬೇಕು ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಪ್ಪ ಬಣಕಾರ, ತಾಲೂಕು ಅಧ್ಯಕ್ಷ ಕರಬಸಪ್ಪ ಹಳದೂರ ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಬೀರಪ್ಪ ಕುರಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net