ಹಾವೇರಿ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಕಾರ್ಯಕಾರಿಣಿ ಸಭೆ ಜೂ.29ರಂದು ಮಧ್ಯಾಹ್ನ 1 ಗಂಟೆಗೆ ವಿದ್ಯಾನಗರದ ಆನೆ ಪಾರ್ಕ್ ಬಳಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಲಿದೆ.
5ನೇ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಶಂಭುಲಿಂಗಪ್ಪ ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸುವಂತೆ ಕೋರಲಾಗಿದೆ ಎಂದು ಸಂಘದ ಹಾವೇರಿ ತಾಲೂಕು ಅಧ್ಯಕ್ಷ ಕರಬಸಪ್ಪ ಹಳದೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.