ಛಾಯಾಗ್ರಾಹಕರ ಸಂಘದ 23ನೇ ವಾರ್ಷಿಕೋತ್ಸವ ಸೆ.13ರಂದು

Published on

ಹಾವೇರಿ: ಇಲ್ಲಿಯ ದಾನೇಶ್ವರಿನಗರದ ಬಂಟರ ಭವನದಲ್ಲಿ ಸೆ.13ರಂದು ಬೆಳಗ್ಗೆ 10.30ಕ್ಕೆ ಹಾವೇರಿ ತಾಲೂಕು ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ 23ನೇ ವಾರ್ಷಿಕೋತ್ಸವ, 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.

ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ರಿತ್ತಿ ಹಾಗೂ ಹಾವೇರಿ ತಾಲೂಕು ಗೌರವಾಧ್ಯಕ್ಷ ಸಿದ್ದಲಿಂಗಪ್ಪ ಹಳ್ಳಿಕೇರಿ ಉಪಸ್ಥಿತರಿರುವರು. ಸಂಘದ ತಾಲೂಕಾಧ್ಯಕ್ಷ ಶಂಭುಗೌಡ ಅಂದಾನಿಗೌಡ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷ ಬಸವರಾಜ ಚಾವಡಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರಿ, ಇತರರು ಭಾಗವಹಿಸುವರು ಎಂದು ಸಂಘದ ತಾಲೂಕು ಕಾರ್ಯದರ್ಶಿ ಮಾಲತೇಶ ಇಚ್ಚಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net