2 ದಿನ, 228 ಜಾಗೃತಿ ಸಭೆ

4 HVR 3
Published on

ಹಾವೇರಿ: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಿಲ್ಲಾ ಪೊಲೀಸರು ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದು, ಎರಡು ದಿನದಲ್ಲಿ 228 ಜಾರಘತಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.
ಗ್ರಾಮಗಳು ಹಾಗೂ ಬೀಟ್ ವ್ಯಾಪ್ತಿಯಲ್ಲಿ ಆಯಾ ಠಾಣೆಗಳ ಪೊಲೀಸರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಕಳ್ಳತನ, ಸೈಬರ್ ಅಪರಾಧ, ಹೆಲ್ಮೆಟ್ ಧರಿಸುವುದು, ಮಾದಕ ವಸ್ತುಗಳ ಸೇವೆನೆಯ ಅಪಾಯ, ಮತ್ತಿತರ ವಿಷಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಎಸ್‌ಪಿ ಅಂಶುಕುಮಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net