ಈ ಸಮಸ್ಯೆಗಳಿಗೆ ಪರಿಹಾರ ಸಿಗುವುದೇ

Published on

ಹಾವೇರಿ: ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಸ್ಥಾಪಿಸುವ ಬೇಡಿಕೆ ಇದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ರೈತರಿಗೆ ಅಭಯ ನೀಡಬೇಕಿದೆ. ಜಿಲ್ಲಾ ಕೇಂದ್ರ ಹಾವೇರಿ ಸೇರಿ ತಾಲೂಕಿಗೆ ಸೂಕ್ತ ಕುಡಿಯುವ ನೀರು ಪೂರೈಸುವ ಹಾಗೂ ಒಳಚರಂಡಿ ಯೋಜನೆ ಪೂರ್ಣಗೊಳಿಸಬೇಕಿದೆ. ಮೋಟೆಬೆನ್ನೂರ, ಛತ್ರ ಬೈಪಾಸ್ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಇನ್ನೂ ಅನೇಕ ಸಮಸೆಗಳು ಜಿಲ್ಲೆಗೆ ಕಾಡುತ್ತಿದ್ದು, ಈ ಬಗ್ಗೆ ಸಿಎಂ ಗಮನ ಹರಿಸಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net