ಪ್ರಥಮ ಪಿಯುಸಿ ಪ್ರವೇಶಾತಿಗೆ ಕೌನ್ಸಲಿಂಗ್ ಜೂನ್ 1ರಂದು

Published on

ಹಾವೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 1ರಂದು ಕೌನ್ಸಲಿಂಗ್ ಆಯೋಜಿಸಲಾಗಿದೆ.
ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 1ರಂದು ಬೆಳಗ್ಗೆ 10 ಗಂಟೆಗೆ ಹಾವೇರಿಯ ಸಿದ್ಧಾರೂಢ ನಗರದ ಅಂಬೇಡ್ಕರ್ ಭವನದಲ್ಲಿ ಕೌನ್ಸಲಿಂಗ್ ಆಯೋಜಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net