ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ಪ್ರದೀಪ ನಂದಿಕೇಶ್ವರಮಠ ಆಯ್ಕೆ

Published on

ಹಾವೇರಿ: ಗದಗಿನ ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ರಾಜ್ಯಾಧ್ಯಕ್ಷರಾಗಿ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ನಿವಾಸಿ ಪ್ರದೀಪ ನಂದಿಕೇಶ್ವರಮಠ ಆಯ್ಕೆಯಾಗಿದ್ದಾರೆ. ಪ್ರದೀಪ ಅವರ ಸಮಾಜ ಸೇವೆಯ ಆಸಕ್ತಿಯನ್ನು ಗಮನಿಸಿ ಸಮಿತಿಯ ಸರ್ವ ಸದಸ್ಯರ ಅಭಿಪ್ರಾಯದೊಂದಿಗೆ ಅಂಗೀಕರಿಸಲಾಗಿದೆ. ಕೇಂದ್ರ ಸಮಿತಿಯ ನಿರ್ಣಯದಂತೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಧಿಕಾರವಧಿ 3 ವರ್ಷ ಅಥವಾ ಕೇಂದ್ರ ಸಮಿತಿ ಅಧ್ಯಕ್ಷರು ಒಪ್ಪುವವರೆಗೆ ಇರುತ್ತದೆ. ಕೂಡಲೇ ರಾಜ್ಯ ಕಾರ್ಯಕಾರಿಣಿ ರಚಿಸಿಕೊಂಡು ಜಿಲ್ಲಾ ಘಟಕಗಳನ್ನು ಪುನರ್ ರಚಿಸಿಕೊಳ್ಳಲು ಸೂಚಿಸಲಾಗಿದೆ. ಡಾ.ಪಂ.ಪುಟ್ಟರಾಜರ ಜೀವನ ಸಾಧನೆ ಸಂದೇಶದ ಪ್ರಚಾರದೊಂದಿಗೆ ಭಕ್ತಿ ಪಂಥದ ಕವಿ, ಗಾಯಕರಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸೇವೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷ ಚನ್ನವೀರ ಸ್ವಾಮಿ ಹಿರೇಮಠ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net