ನಾಗೇಂದ್ರನಮಟ್ಟಿ ರೈಲ್ವೆ ಕೆಳಸೇತುವೆಯಲ್ಲಿ ಮುಳುಗಿದ ಆಟೋ

Published on

ಹಾವೇರಿ: ನಗರದ ನಾಗೇಂದ್ರನಮಟ್ಟಿ ಬಳಿಯ ರೈಲ್ವೆ ಕೆಳಸೇತುವೆಯಲ್ಲಿ ಮಳೆ ನೀರಿನಲ್ಲಿ ಬುಧವಾರ ಆಟೋವೊಂದು ಮುಳುಗಿದೆ. ಅದೃಷ್ಟವಶಾತ್ ಆಟೋ ಚಾಲಕ ಪಾರಾಗಿದ್ದು, ಆಟೋ ಸಂಪೂರ್ಣವಾಗಿ ಮುಳುಗಿದೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ರೈಲು ನಿಲ್ದಾಣದ ಬಳಿ ಸಂಜೆ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಕೆಲ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರ ನಿದ್ದೆಗೆಡಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net