ಹಾವೇರಿ: ರೈತರ ಪ್ರತಿಭಟನೆಗೆ ಮಣಿದು ರಾಜ್ಯ ಸರ್ಕಾರ ಜಿಲ್ಲೆಯ ಬ್ಯಾಡಗಿ, ಹಾನಗಲ್ಲ, ಶಿಗ್ಗಾಂವಿ ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರಿಸಿರುವುದು ಸಂತಸ ತಂದಿದೆ.
ಬರ ಪಟ್ಟಿಯಿಂದ ಮೂರು ತಾಲೂಕುಗಳನ್ನು ಹೊರಗಿಟ್ಟ ಕಾರಣ ಮೂರು ತಾಲೂಕುಗಳಲ್ಲಿ ಸತತವಾಗಿ 5 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರವನ್ನು ಎಚ್ಚರಿಸಿದ ಫಲವಾಗಿ ಸರ್ಕಾರ ಬರ ಪಟ್ಟಿಗೆ ಸೇರಿಸಿದೆ. ಸರ್ಕಾರ ಹಾಗೂ ಮಾಧ್ಯಮಗಳಿಗೆ ಧನ್ಯವಾದಗಳು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ತಾಲೂಕು ಘಟಕದ ಅಧ್ಯಕ್ಷ ದಿಳ್ಳೆಪ್ಪ ಮಣ್ಣೂರ ಹಾಗೂ ಕಾರ್ಯದರ್ಶಿ ಶಿವಯೋಗಿ ಹೊಸಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.