

ಹಾವೇರಿ: ಜಿಲ್ಲಾ ಉಸ್ತುವಾರಿ ಸಚಿವರು ರೈತ ಮುಖಂಡರನ್ನುವಿಧಾನಸೌಧಕ್ಕೆ ಕರೆಸಿ ಚರ್ಚೆ ಮಾಡಿದ್ದಕ್ಕೆ ಧನ್ಯವಾದಗಳು. ಭಾಗಶಃ ಎಲ್ಲ ವಿಚಾರಗಳ ಚರ್ಚೆ ನಡೆದಿದೆ. ಭರವಸೆ ನೀಡಿದ್ದಾರೆ. ಆದರೆ, ಅಹೋರಾತ್ರಿ ಧರಣಿ ನಿಲ್ಲಿಸಬೇಕೋ ಬೇಡವೋ ಎಂಬ ಕುರಿತು ಬುಧವಾರ ಪ್ರತಿಭಟನಾ ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹಾಗೂ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದ್ದಾರೆ.