

ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಹಾವೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಒಂಭತ್ತನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಸವಣೂರ ತಾಲೂಕು ರೈತರ ನೇತೃತ್ವದಲ್ಲಿ ಧರಣಿ ನಡೆಯಿತು. ಧರಣಿಗೆ ಕ್ರಷರ್ ಮಾಲೀಕರ ಸಂಘ ಬೆಂಬಲ ಸೂಚಿಸಿತು. ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಎಚ್.ಎಚ್.ಮುಲ್ಲಾ, ಮಲ್ಲಿಕಾರ್ಜುನ ಬಳ್ಳಾರಿ, ಕರಬಸಪ್ಪ ಬಳ್ಳಾರಿ, ಮುತ್ತಪ್ಪ ಗುಡಗೇರಿ, ಚನ್ನಪ್ಪ ಮರಡೂರ, ಗುಡ್ಡನಗೌಡ ಪ್ಯಾಟಿಗೌಡ್ರ, ಮರಿಗೌಡ್ರ ಪಾಟೀಲ, ಇತರರು ಪಾಲ್ಗೊಂಡಿದ್ದರು.