

ಹಾವೇರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕನ್ನಡ ಗೀತೆಗಳಿಗೆ ಗುಂಪು ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಧ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಕನ್ನಡ ಗೀತೆಗಳಿಗೆ ಗುಂಪು ನೃತ್ಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವ ತಂಡಗಳಿಗೆ ಪ್ರಥಮ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 75 ಸಾವಿರ ರೂ., ತೃತೀಯ ಬಹುಮಾನ 50 ಸಾವಿರ ರೂ. ಹಾಗೂ ಸಮಾಧಾನಕರ ಬಹುಮಾನ 20 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ನೋಂದಣಿ ಮಾಡಿಸಿಕೊಳ್ಳಲು ನ.2ರಂದು ಸಂಜೆ 5ಗಂಟೆ ಕೊನೆಯ ದಿನವಾಗಿದೆ. ಆದ್ದರಿಂದ ಜಿಲ್ಲೆಯ ಆಸಕ್ತ ಸರ್ಕಾರಿ ನೌಕರರು/ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಗೂಗಲ್ ನಮೂನೆಯ ಸಂಪರ್ಕ ಲಿಂಕ್https://forms.gle/8pR3m5nXowwQzccs9 ನಲ್ಲಿ ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದು. ಜಿಲ್ಲೆಯ ಆಸಕ್ತ ಸರ್ಕಾರಿ ನೌಕರರು ಪಾಲ್ಗೊಳ್ಳಬಹುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಕರಿಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.