ರಾಜ್ಯೋತ್ಸವ ಸನ್ಮಾನಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವಂಬರ್ 1ರಂದು ನಗರದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲು ನಾಟ್ಯ, ನೃತ್ಯ, ಚಿತ್ರಕಲೆ, ಸಾಹಿತ್ಯ ಸಂಗೀತ ಹಾಗೂ ಸ್ವಚ್ಛತೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಸಾಧನೆಯ ಎಲ್ಲ ದಾಖಲೆಗಳೊಂದಿಗೆ ಅ.27ರೊಳಗಾಗಿ ‘ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಚೇರಿ, ಜಿಲ್ಲಾಡಳಿತ ಭವನ, 32 ಬಿ ಬ್ಲಾಕ್, ಹಾವೇರಿ’ ಈ ವಿಳಾಸಕ್ಕೆ ಸಲ್ಲಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net