ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ನಾಳೆ, 10ರಂದು

Published on

ಹಾವೇರಿ: ಏ.6ರಂದು ಶ್ರೀರಾಮನವಮಿ ಹಾಗೂ ಏ.10ರಂದು ಮಹಾವೀರ ಜಯಂತಿ ಪ್ರಯುಕ್ತ ಎರಡು ದಿನಗಳಂದು ಹಾವೇರಿ ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮೀನು ಮತ್ತು ಮಾಂಸ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ.

ಈ ಎರಡು ದಿನ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಲು ತಿಳಿಸಲಾಗಿದೆ. ತಪ್ಪಿದಲ್ಲಿ ಅಂತಹ ಅಂಗಡಿಗಳ ಉದ್ದಿಮೆ ಪರವಾನಿಗೆ ರದ್ದುಪಡಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ಎಚ್.ಬಿ ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net