ಜಗದ್ಗುರು ರೇಣುಕಾಚಾರ್ಯ ಮೂರ್ತಿಗೆ ಬೆಳ್ಳಿ ಕವಚ ಸಮರ್ಪಣೆ; ಲಿಂ.ರಂಭಾಪುರಿ ಜಗದ್ಗುರು ವೀರರುದ್ರಮುನಿ ಶಿವಾಚಾರ್ಯರ ಜನ್ಮ ಶತಮಾನೋತ್ಸವ ಫೆ.14ರಂದು

Gourimatha Sri Pc
Published on

ಹಾವೇರಿ: ನಗರದ ಎಂಜಿ ರಸ್ತೆಯ ನಡುವಿನಮಠದಲ್ಲಿ ಫೆ.14ರಂದು ಸಂಜೆ 5 ಗಂಟೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಮೂರ್ತಿಗೆ ಬೆಳ್ಳಿ ಕವಚ ಸಮರ್ಪಣೆ ಹಾಗೂ ಲಿಂ.ಶ್ರೀ ರಂಭಾಪುರಿ ಜಗದ್ಗುರು ರುದ್ರಮುನಿ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವ ಧರ್ಮ ಸಮಾರಂಭ ನಡೆಯಲಿದೆ ಎಂದು ಕರ್ಜಗಿ ಗೌರಿಮಠದ ಶ್ರೀ ಶಿವಯೋಗೀಶ್ವರ ಶಿವಾಚಾರ್ಯರು ತಿಳಿಸಿದರು.

ನಗರದ ನಡುವಿನಮಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಜಗದ್ಗುರು ರೇಣುಕಾಚಾರ್ಯ ಮಂದಿರದ ಸ್ಥಾಪನೆಗಾಗಿ 1985ರಲ್ಲಿ ಆಶೀರ್ವದಿಸಿದ ಶ್ರೀ ಜಗದ್ಗುರು ರಂಭಾಪುರಿ ಪೀಠದ 120ನೇ ಜಗದ್ಗುರುಗಳಾದ ಲಿಂ.ಶ್ರೀ ರಂಭಾಪುರಿ ಜಗದ್ಗುರು ರುದ್ರಮುನಿ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವವನ್ನು ನಾಡಿನಾದ್ಯಂತ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ನಡುವಿನಮಠದ ನವೀಕರಣ ಶಿಲಾನ್ಯಾಸವು ಶ್ರೀ ರಂಭಾಪುರಿ ಜಗದ್ಗುರುಗಳ ಅಮೃತ ಹಸ್ತದಿಂದ ಜರುಗಲಿದೆ ಎಂದರು.

ಬಣ್ಣದಮಠದ ಅಭಿನವ ರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿ, ಬಂಕಾಪುರದ ರೇವಣಸಿದ್ದೇಶ್ವರ ಶಿವಾಚಾರ್ಯರು, ರಟ್ಟೀಹಳ್ಳಿ ಶಿವಲಿಂಗ ಶಿವಾಚಾರ್ಯರು, ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ, ನೆಗಳೂರು ಗುರುಶಾಂತೇಶ್ವರ ಶಿವಾಚಾರ್ಯರು, ಲಿಂಗದಹಳ್ಳಿ ವೀರಭದ್ರ ಶಿವಾಚಾರ್ಯರು, ಕೂಡಲದ ಮಹೇಶ್ವರ ಶಿವಾಚಾರ್ಯರು ಉಪಸ್ಥಿತರಿರುವರು.

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣನವರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಎಸ್‌ಪಿ ಅಂಶುಕುಮಾರ, ಮಾಜಿ ಶಾಸಕರಾದ ಶಿವರಾಜ ಸಜ್ಜನ, ನೆಹರು ಓಲೇಕಾರ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ವರ್ತಕರಾದ ಬಸವರಾಜ ಮಳಗಿ, ಪುಂಡಲೀಕಪ್ಪ ಶಿರೂರ, ಅ.ಭಾ.ವೀ.ಲಿಂ. ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಕೋರಿಶೆಟ್ಟರ, ಕಾ.ನಿ.ನಿರ್ದೇಶಕ ಶಂಬಣ್ಣ ಚಕ್ಕಡಿ, ವರ್ತಕರ ಸಂಘದ ಅಧ್ಯಕ್ಷ ರಾಜಶೇಖರ ಹನುಮನಹಳ್ಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ.ಹಿರೇಮಠ, ಸಿದ್ದರಾಜ ಕಲಕೋಟಿ, ಈಶ್ವರಯ್ಯ ನಡುವಿನಮಠ, ಶಿವಯ್ಯ ನಡುವಿನಮಠ, ಇತರರು ಭಾಗವಹಿಸುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಸೇವಾ ಸಮಿತಿ ಅಧ್ಯಕ್ಷ ಕುಮಾರ ಸಾತೇನಹಳ್ಳಿ, ಉಪಾಧ್ಯಕ್ಷ ಶಂಕ್ರಯ್ಯ ಹುಬ್ಬಳ್ಳಿಮಠ, ಕಾರ್ಯದರ್ಶಿ ಬಸವರಾಜ ಜಾಬಿನ, ಖಜಾಂಚಿ ಎಸ್.ಜಿ.ಬೆನಕೊಪ್ಪ, ರಂಭಾಪುರ ಪೀಠದ ಆಡಳಿತಾಧಿಕಾರಿ ಎಸ್.ಬಿ ಹಿರೇಮಠ, ಮಾಲತೇಶ ಹಿರೇಮಠ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net