ಚುನಾವಣಾಧಿಕಾರಿಗಳ ನೇಮಕ

Published on

ಹಾವೇರಿ: ವಿವಿಧ ಕಾರಣದಿಂದ ತೆರವಾದ ರಾಣೇಬೆನ್ನೂರ ನಗರಸಭೆ 22ನೇ ವಾರ್ಡ್ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ-2023ರ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
ರಾಣೇಬೆನ್ನೂರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೇವಲಾ ನಾಯ್ಕ ಚುನಾವಣಾಧಿಕಾರಿಯಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಿಆರ್‌ಸಿ ಮಂಜು ನಾಯ್ಕ ಅವರನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net