ಮೋದಿ ಪ್ರಮಾಣ ವಚನಕ್ಕೆ ಬಿರಂಜಿ ಊಟ ಇಂದು; ರಾಣೆಬೆನ್ನೂರ ವಂದೇಮಾತರಂ ಸ್ವಯಂಸೇವಾ ಸಂಸ್ಥೆಯಿಂದ ಆಯೋಜನೆ

Buradikatti kitti Modi
Published on

ರಾಣೆಬೆನ್ನೂರ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ವಂದೇ ಮಾತರಂ ಸ್ವಯಂಸೇವಾ ಸಂಸ್ಥೆ ವತಿಯಿಂದ ಜೂ.9ರಂದು ಮಧ್ಯಾಹ್ನ 3 ಗಂಟೆಯಿಂದ ನಗರದ ಕುರುಬಗೇರಿ ಕ್ರಾಸ್ ಬಳಿ ಇರುವ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಿ, ಸುಮಾರು 10 ಸಾವಿರ ಜನರಿಗೆ ಬಿರಂಜಿ, ಸಿಹಿ ಊಟದ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಪೂಜೆ, ಹೋಮ ನಡೆಯಲಿದ್ದು, ಸಂಜೆ 6 ಗಂಟೆಗೆ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ ಸಮಾರಂಭ ವೀಕ್ಷಿಸಲು ದೊಡ್ಡ ಎಲ್‌ಇಡಿ ಪರದೆ ಅಳವಡಿಸಲಾಗುವುದು. ಸಂಜೆ 7 ಗಂಟೆಯಿಂದ ಮೋದಿ ಅವರ ಅಭಿಮಾನಿಗಳಿಗೆ ಭೋಜನ ಕೂಟ ಏರ್ಪಡಿಸಲಾಗಿದೆ. ನಂತರ ರಾತ್ರಿ 8 ಗಂಟೆಗೆ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನ ಭಾರತ ಮತ್ತು ಪಾಕಿಸ್ತಾನ ಪಂದ್ಯಾವಳಿಯ ನೇರ ಪ್ರಸಾರ ಸಮಾರಂಭ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರಾಭಿಮಾನಿಗಳು ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net