ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಿ ಡಿಸಿ ಆದೇಶ

Published on

ಹಾವೇರಿ: ರಾಣೆಬೆನ್ನೂರ ನಗರದಲ್ಲಿ ಜ.12ರಿಂದ 18ರವರೆಗೆ ನಡೆಯಲಿರುವ ಗ್ರಾಮದೇವತೆ ಶ್ರೀ ಗಂಗಾಜಲ ಚೌಡೇಶ್ವರಿ ದೇವಿಯ ಜಾತ್ರೆ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಿ ಮತ್ತು ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನದ ಆವರಣ ಅಥವಾ ನಗರ ವ್ಯಾಪ್ತಿ ಮತ್ತು ಹೊರವಲಯದಲ್ಲಿ ಭಕ್ತರು, ಸಾರ್ವಜನಿಕರು ದೇವರ ಹೆಸರಿನಲ್ಲಿ ಪ್ರಾಣಿ, ಪಕ್ಷಿಗಳ ಬಲಿ ಕೊಡಬಾರದು. ಹಾವೇರಿ ಉಪ ವಿಭಾಗಾಧಿಕಾರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಈ ಕುರಿತು ಜಂಟಿ ಸಭೆ ನಡೆಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net