ಹಾವೇರಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದವರ ಸಹಯೋಗದಲ್ಲಿ ಕಿತ್ತೂರ ರಾಣಿ ವನ್ನಮ್ಮ ಜಯಂತಿ ಕಾರ್ಯಕ್ರಮ ಅ.27ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷ ವಚನಾನಂದ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ಪಿ.ಡಿ.ಶಿರೂರ ಪಾಲ್ಗೊಳ್ಳಲಿದ್ದಾರೆ. ನೇಸರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಡಾ.ಎಫ್.ಡಿ.ಗಡ್ಡಿಗೌಡರ ಉಪನ್ಯಾಸ ನೀಡಲಿದ್ದಾರೆ.