ವೀರರಾಣಿ ಕಿತ್ತೂರು ಚನ್ನಮ್ಮ ಜಯಂತ್ಯುತ್ಸವ

23 HVR 6
Published on

ಹಾವೇರಿ: ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಹಾಗೂ ಜಿಲ್ಲಾಡಳಿತ ಭವನದಲ್ಲಿ ಗುರುವಾರ ವೀರರಾಣಿ ಕಿತ್ತೂರು ಚನ್ನಮ್ಮ ಅವರ 201ನೇ ಜಯಂತ್ಯುತ್ಸವ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ನಗರದ ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಜಿಲ್ಲಾಡಳಿತದಿಂದ ಡಿಸಿ ಕಚೇರಿಯಲ್ಲಿ ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಎಎಸ್‌ಪಿ ಲಕ್ಷ್ಮಣ ಶಿರಕೋಳ, ಹರಿಹರ ಪಂಚಮಸಾಲಿ ಪೀಠದ ಧರ್ಮದರ್ಶಿ ಪಿ.ಡಿ.ಶಿರೂರ, ಪಂಚಮಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಶಂಕರ ಬಿಸರಳ್ಳಿ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಅಗಡಿ, ತಾಲೂಕು ಅಧ್ಯಕ್ಷ ಸಂತೋಷ ಕೊಟ್ರಪ್ಪನವರ, ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ಪ್ರಮುಖರಾದ ಮಲ್ಲಿಕಾರ್ಜುನ ಹಾವೇರಿ, ಕೊಟ್ರೇಶಪ್ಪ ಬಸೇಗೆಣ್ಣಿ, ಬಸವರಾಜ ಅರಬಗೊಂಡ, ಪ್ರಭು ಬಿಷ್ಟನಗೌಡ್ರ, ಡಾ.ಬಸವರಾಜ ವೀರಾಪುರ, ಪರಮೇಶಪ್ಪ ಮೇಗಳಮನಿ, ಜಗದೀಶ ಕನವಳ್ಳಿ, ಭುವನೇಶ್ವರ ಶಿಡ್ಲಾಪುರ, ದಾನೇಶಪ್ಪ ಕೆಂಗೊಂಡ, ಹೊಳಿಯಪ್ಪ ಸೂರದ, ಸದಾನಂದ ಹಾದಿಮನಿ, ನಂಜುಂಡೇಶ ಕಳ್ಳೇರ, ಕೊಟ್ರೇಶ ವಿಜಾಪುರ, ಸೋಮು ಎಣ್ಣಿಯವರ, ಶಿವಯೋಗಿ ಹೊಸಗೌಡ್ರ, ರಾಜೇಶ್ವರಿ ಬಿಡ್ನಗೌಡ್ರ, ಲಲಿತಾ ಗುಂಡೇನಹಳ್ಳಿ, ಚನ್ನಮ್ಮ ಬ್ಯಾಡಗಿ, ಮಮತಾ ಜಾಬಿನ, ಚಂಪಾ ಹುಣಸಿಕಟ್ಟಿ, ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net