ರಟ್ಟಿಹಳ್ಳಿಯಲ್ಲಿ ಲೋಕಾಯುಕ್ತರ ಸಭೆ 26ರಂದು

Published on

ಹಾವೇರಿ: ಲೋಕಾಯುಕ್ತ ಅಧಿಕಾರಿಗಳಿಂದ ನ.26ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ರಟ್ಟಿಹಳ್ಳಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಜರುಗಲಿದೆ.

ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ, ಸಾರ್ವಜನಿಕ ಕೆಲಸ ಕಾರ್ಯಗಳ ವಿಳಂಬ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಗಳಿಕೆ, ಸರ್ಕಾರಿ ಹಣ ದುರುಪಯೋಗ, ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿ, ನೌಕರರಿಂದ ಲಂಚ ಕೇಳುವ ದೂರುಗಳಿದ್ದರೆ ಲೋಕಾಯುಕ್ತ ನಡೆಸುವ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ದೂರುಗಳನ್ನು ಸಲ್ಲಿಸಬಹುದಾಗಿದೆ.

ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ. ಸಭೆಯ ನಂತರ ವಿವಿಧ ಇಲಾಖೆಯ ಕಚೇರಿಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಲೋಕಾಯುಕ್ತ ಡಿಎಸ್‌ಪಿ ಬಿ.ಪಿ.ಚಂದ್ರಶೇಖರ, ಪೊಲೀಸ್ ನಿರೀಕ್ಷಕರಾದ ಮುಸ್ತಾಕ್ ಅಹ್ಮದ್, ಮಂಜುನಾಥ ಪಂಡಿತ ಹಾಗೂ ದಾದಾವಲಿ ಕೆ.ಎಚ್. ಅಹವಾಲು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net