

ಹಾವೇರಿ: ಬಕ್ರಿದ್ ಹಬ್ಬದ ನಮಾಜ್ ವೇಳೆ ಒಂದೇ ಸಮುದಾಯದ ಜನರು ಹೊಡೆದಾಡಿಕೊಂಡ ಘಟನೆ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಜನ ಪ್ರಾರ್ಥನೆ ಸಲ್ಲಿಸಲು ಈದ್ಗಾ ಮೈದಾನದಲ್ಲಿ ಜಮಾಯಿಸಿದ್ದರು.
ಈ ವೇಳೆ ಅಂಜುಮನ್ ಕಮಿಟಿಯ ಲೆಕ್ಕ ಪತ್ರದ ವಿಚಾರವಾಗಿ ಕೆಲವರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಏರ್ಪಟ್ಟಿತ್ತು.
ಜಗಳ ವಿಕೋಪಕ್ಕೆ ತಿರುಗಿದಾಗ ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ಒಬ್ಬನಿಗೆ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ರಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.