ರಟ್ಟಿಹಳ್ಳಿ ಕರಡು ಮತದಾರರ ಪಟ್ಟಿ ಪ್ರಕಟ

Published on

ಹಾವೇರಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ರಟ್ಟಿಹಳ್ಳಿ ಪಂಚಾಯಿತಿಯ 15 ವಾರ್ಡುಗಳ ಚುನಾವಣೆ ಹಿನ್ನೆಲೆಯಲ್ಲಿ ಜು.18ರಂದು ಕರಡು ಮತದಾರರ ಪಟ್ಟಿಯನ್ನು ರಟ್ಟೀಹಳ್ಳಿ ತಹಸೀಲ್ದಾರ್ ಕಾರ್ಯಾಲಯ, ಪಟ್ಟಣ ಪಂಚಾಯಿತಿ ಕಾರ್ಯಾಲಯ, ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಮತದಾರರು ತಮ್ಮ ಹೆಸರು ಪ್ರಕಟಗೊಂಡ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಅಂತಿಮ ಮತದಾರರ ಪಟ್ಟಿಯನ್ನು ಜು.25ರಂದು. ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2025ಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net