ರೆಡ್ ಕ್ರಾಸ್ ದಿನಾಚರಣೆ, ರಕ್ತದಾನ ಶಿಬಿರ 8ರಂದು

29hvr-01 Red Cross society
Published on

ಹಾವೇರಿ: ಭಾರತೀಯ ರೆಡ್ ಕ್ರಾಸ್ ದಿನಾಚರಣೆಯನ್ನು ಮೇ 8ರಂದು ಜಿಲ್ಲಾಡಳಿತ ಭವನದಲ್ಲಿ ಉಚಿತ ರಕ್ತದಾನ ಶಿಬಿರ ಹಾಗೂ ವಿವಿಧ ಪಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಗೌರವ ಕಾರ್ಯಾಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದರು.

ನಗರದ ರೆಡ್ ಕ್ರಾಸ್ ಸಂಸ್ಥೆಯ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಹಲವಾರು ಸಾಮಾಜಿಕ ಸೇವಾ ಕಾರ್ಯ ಮಾಡುತ್ತಿದೆ. ಕ್ರಿಯಾಶೀಲವಾಗಿ ಕೆಲಸ ಮಾಡಲು ಎಲ್ಲರ ಸಹಕಾರ ಅಗತ್ಯವಿದೆ. ಜಿಲ್ಲಾ ನೌಕರರ ಸಂಘದ ಸಹಯೋಗ ಹಾಗೂ ಸಾರ್ವಜನಿಕ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗುವುದು. ವಿಶ್ವ ರೆಡ್ ಕ್ರಾಸ್ ಸಂಸ್ಥೆಯ ದಿನಾಚರಣೆ ಕಾರ್ಯಕ್ರಮಕ್ಕೆ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರು ಹಾಗೂ ಸರ್ವ ಸದಸ್ಯರು ಭಾಗಿಯಾಗಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ನೀಲೇಶ ಎಂ.ಎನ್., ರಾಜ್ಯ ಸಮಿತಿ ಸದಸ್ಯ ರವಿ ಮೆಣಸಿನಕಾಯಿ, ಗೌರವ ಸಹಕಾರ್ಯದರ್ಶಿ ನಿಂಗಪ್ಪ ಆರೇರ, ಖಜಾಂಚಿ ಪ್ರಭು ಹಿಟ್ನಳ್ಳಿ, ಸದಸ್ಯರಾದ ಹನುಮಂತಪ್ಪ ಗೊಲ್ಲರ, ರವಿ ಹಿಂಚಿಗೇರಿ, ಉಡಚಪ್ಪ ಮಾಳಗಿ, ಡಾ.ಪ್ರದೀಪ ದೊಡ್ಡಗೌಡ್ರ, ಸಂಯೋಜಕ ಡಾ.ಅಂಕಿತ ಆನಂದ, ಪದಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net