ವಿವಿಧ ಕ್ಷೇತ್ರದ ಸಾಧಕರಿಂದ ಅರ್ಜಿ ಆಹ್ವಾನ

Published on

ಹಾವೇರಿ: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತದಿಂದ ಕ್ರೀಡೆ ಸೇರಿದಂತೆ ವಿವಿಧ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಹಾಗೂ ಸಾಹಸ, ಕೃಷಿ, ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರು ಸಾಧನೆಯ ದಾಖಲೆಗಳೊಂದಿಗೆ ಜ.20ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, 32, ಬಿ ಬ್ಲಾಕ್ ಹಾವೇರಿ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net