ನದಿಪಾತ್ರದಲ್ಲಿ ಸಾರ್ವಜನಿಕರ ತಿರುಗಾಟ ನಿಷೇಧ; ಭದ್ರಾ ಜಲಾಶಯದಿಂದ ನೀರು ಬಿಡುವ ಮುನ್ನೆಚ್ಚರಿಕೆ

Tungabhadra Haralahalli jalamapana center
Published on

ಹಾವೇರಿ: ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟಕ್ಕೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವವಿದೆ.
ಆದ್ದರಿಂದ ಆಣೆಕಟ್ಟು ಸುರಕ್ಷತೆಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳ ಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್‌ವೆ ಗೇಟ್ ಮೂಲಕ ನದಿಗೆ ಬಿಡಲಾಗುವುದು. ಆದ್ದರಿಂದ ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net