ಎಜುಕೇಟರ್ ಹುದ್ದೆಗೆ ಅರ್ಜಿ ಆಹ್ವಾನ

Published on

ಹಾವೇರಿ: ರಾಣೆಬೆನ್ನೂರ ನಗರದ ಬಾಲಕರ ಸರ್ಕಾರಿ ಬಾಲಮಂದಿರ ಸಂಸ್ಥೆಯಲ್ಲಿರುವ ಮಕ್ಕಳಿಗೆ 2025-26ನೇ ಸಾಲಿಗೆ ಪಾಠ ಮಾಡಲು ಎಜುಕೇಟರ್ (ಅರೆಕಾಲಿಕ ಪಾಠ ಹೇಳುವ ಶಿಕ್ಷಕ ಹಾಗೂ ಶಿಕ್ಷಕಿಯರ) ಹುದ್ದೆಗೆ ಗೌರವಧನ ಆಧಾರದ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಬಿ.ಎಸ್ಸಿ, ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ 25ರಿಂದ 55 ವರ್ಷದೊಳಗಿರಬೇಕು. ಮೂರು ವರ್ಷ ಅನುಭವ ಹೊಂದಿರಬೇಕು. ಮಾಸಿಕ 10 ಸಾವಿರ ರೂ. ಗೌರವಧನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸೆ.6ರ ಒಳಗೆ ಸರ್ಕಾರಿ ಬಾಲಕರ ಬಾಲಮಂದಿರ, ಹೊಸನಗರ, ಚರ್ಚ್ ರೋಡ್, ಗುಪ್ತಾ ಹೈಸ್ಕೂಲ್ ಹತ್ತಿರ, ರಾಣೆಬೆನ್ನೂರ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net