ಕ್ಯಾಂಟಿನ್ ಆರಂಭಿಸಲು ಅರ್ಜಿ ಆಹ್ವಾನ

Published on

ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ರಾಣೇಬೆನ್ನೂರ ನ್ಯಾಯಾಲಯ ಸಂಕೀರ್ಣದಲ್ಲಿ ಕ್ಯಾಂಟಿನ್ ನಡೆಸಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಆಡಳಿತಾಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸನ್ಯಾಯಾಲಯ, ಹಾವೇರಿ ಈ ವಿಳಾಸದಲ್ಲಿ ಪಡೆಯಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರು, ಹಾವೇರಿ ಇವರಿಗೆ ಸಲ್ಲಿಸಬೇಕು.
ಬ್ಯಾಡಗಿ ನ್ಯಾಯಾಲಯ ಸಂಕೀರ್ಣದಲ್ಲಿ ಕ್ಯಾಂಟಿನ್ ನಡೆಸಲು ಆಗಸ್ಟ್ 3ರ ಸಂಜೆ 5.30ರೊಳಗೆ ಹಾಗೂ ರಾಣೇಬೆನ್ನೂರ ನ್ಯಾಯಾಲಯ ಸಂಕೀರ್ಣದಲ್ಲಿ ಕ್ಯಾಂಟಿನ್ ನಡೆಸಲು ಆಗಸ್ಟ್ 4ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net