ಪಿಯುಸಿ ಫಲಿತಾಂಶ, ವಿಜ್ಞಾನ ವಿಭಾಗದಲ್ಲಿ ಹಾವೇರಿ ವಿದ್ಯಾರ್ಥಿನಿಗೆ ರಾಜ್ಯದಲ್ಲಿ ಮೂರನೇ ಸ್ಥಾನ

Published on

ಹಾವೇರಿ: ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹಾವೇರಿ ಜಿಲ್ಲೆಯ ವಿದ್ಯಾರ್ಥಿನಿ ಕ್ಷಮಾ ಸಿ.ಪಿ ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಜಿಲ್ಲೆಯ ರಾಣೆಬೆನ್ನೂರ ತಾಲ್ಲೂಕಿನ ಖನ್ನೂರು ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ಕ್ಷಮಾ 597 ಅಂಕಗಳನ್ನು ಪಡೆದುಕೊಂಡಿದ್ದಾರೆ.

ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುವ ಕ್ಷಮಾ, ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಕ್ಷಮಾ ಅವರು ಭೌತ ವಿಜ್ಞಾನದಲ್ಲಿ 100, ರಸಾಯನ ವಿಜ್ಞಾನ-100, ಗಣಿತ-100, ಜೀವ ವಿಜ್ಞಾನ- 100, ಕನ್ನಡ-100 ಹಾಗೂ ಇಂಗ್ಲಿಷ್‌ನಲ್ಲಿ 97 ಅಂಕ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net