ಹಾವೇರಿ: ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕಾಲೇಜ್ ಎನ್.ಎಸ್.ಎಸ್. ಘಟಕ ಹಾಗೂ ರಾಣೆಬೆನ್ನೂರ ಸ್ವಾಮಿ ವಿವೇಕಾನಂದ ಸಂಘದ ಸಹಯೋಗದಲ್ಲಿ ಪ್ರಸಕ್ತ 2024-25ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಪ್ತಾಹ ಕಾರ್ಯಕ್ರಮ ಜ.13ರಿಂದ 18ರವರೆಗೆ ರಾಣೆಬೆನ್ನೂರ ನಗರದ ರಾಜ ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ವಿದ್ಯಾಲಯದಲ್ಲಿ ನಡೆಯಲಿದೆ.
ಜ.13ರಂದು ದೇಶಭಕ್ತಿ ಗೀತೆ ಕಾರ್ಯಕ್ರಮ, ಜ.15ರಂದು ಸದೃಢ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಪ್ರಬಂಧ ಸ್ಪರ್ಧೆ, ಜ.16ರಂದು ಸ್ವಾಮಿ ವಿವೇಕಾನಂದರ ಕಲ್ಪನೆ ಬಗ್ಗೆ ಭಾಷಣ, ಜ.17ರಂದು ಚಿತ್ರಕಲಾ ಸ್ಪರ್ಧೆ ಹಾಗೂ ಜ.18ರಂದು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 15ರಿಂದ 19 ವರ್ಷದೊಳಗಿನ ಯುವಕ ಮತ್ತು ಯುವತಿಯರು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.