ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17ರ ಗಡವು; ಆರ್‌ಟಿಒ ವಸೀಂಬಾಬಾ

HSRP
Published on

ಹಾವೇರಿ: ಸಾರಿಗೆ ಇಲಾಖೆ ಆದೇಶದಂತೆ ರಾಜ್ಯದಲ್ಲಿ ಎಪ್ರಿಲ್ 1, 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಫೆಬ್ರವರಿ 17, 2024ರೊಳಗಾಗಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಳೆಯ ದ್ವಿಚಕ್ಕ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳ ಮೇಲೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನ.17ರವರೆಗೆ ಕಾಲಾವಕಾಶ ನೀಡಿಲಾಗಿತ್ತು. ಆದರೆ, ಈ ದಿನಾಂಕವನ್ನು ಫೆ.17ರವರೆಗೆ ವಿಸ್ತರಿಸಲಾಗಿದೆ.
ಎಚ್‌ಎಸ್‌ಆರ್‌ಪಿ ಅಳವಡಿಸದ ಹೊರತು ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡ ವಿಧಿಸುವುದಿಲ್ಲ.
ಸಾರ್ವಜನಿಕರು ಆನ್‌ಲೈನ್ ಮೂಲಕ ಎಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಮೊ.ಸಂ. 94498 63429 ಹಾಗೂ 94498 63426 ಮೂಲಕ ಸಹಾಯವಾಣಿಗೆ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಳವಡಿಕೆ ವಿಧಾನ ಹೇಗೆ ?
https://transport.karnataka.gov.in essaza www.siam in ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಃಞ ಊಖ ನ್ನು ಕ್ಲಿಕ್ ಮಾಡಿ. ಬುಕ್ ಎಚ್‌ಆರ್‌ಪಿ ಬಟನ್ ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. ಎಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು. ನಿಮ್ಮ ಅನುಕೂಲಕ್ಕೆ ತಕ್ಕಂತೆ ಎಚ್‌ಎಸ್‌ಆರ್‌ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ, ವಾಹನ ಮಾಲೀಕರ ಕಚೇರಿ ಅವರಣ/ ಮನೆಯ ಸ್ಥಳದಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ನಕಲಿಗಳ ಬಗ್ಗೆ ಎಚ್ಚರವಿರಲಿ
https://transport.karnataka.gov.in ಅಥವಾ www.siam.in ಮೂಲಕ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆ ನೋಂದಣಿ ಮಾಡಿಸಿಕೊಳ್ಳಬೇಕು. ಮಾರುಕಟ್ಟೆಯಲ್ಲಿ, ರಸ್ತೆ ಬದಿ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ ಅಥವಾ ಇಂಡಿಯಾ ಎಂದು ಕೆತ್ತಲಾದ ಅನುಕರಣೆಯ ಸ್ಮಾರ್ಟ್ ನಂಬರ್ ಪ್ಲೇಟ್ ಅಳವಡಿಸುವಂತಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net