ನಾನೂ ಸಚಿವ ಸ್ಥಾನದ ಆಕಾಂಕ್ಷಿ; ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ

Rudrappa Lamani PC
Published on

ಹಾವೇರಿ: ರಾಜ್ಯದಲ್ಲಿ ಲಂಬಾಣಿ ಸಮುದಾಯದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ನಾನು. ಹಾಗಾಗಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.

ಮೊದಲ ಅವಧಿಯಲ್ಲೇ ಸಚಿವ ಸ್ಥಾನದ ಪಟ್ಟಿಗೆ ಸೇರಿಸಿ ನಂತರ ಕೈಬಿಡಲಾಯಿತು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖಗೆ ಅವರೊಂದಿಗೆ ಮಾತನಾಡಿದ್ದೇವೆ. ಎರಡನೇ ಅವಧಿಯಲ್ಲಿ ಅವಕಾಶ ನೀಡಲಾಗುವುದು ಎಂದು ಸುರ್ಜೇವಾಲಾ ಅವರು ಭರವಸೆ ನೀಡಿದ್ದರಿಂದ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಒಪ್ಪಿಕೊಂಡೆ.

ಈ ಸಲ ಅವಕಾಶ ನೀಡುವ ಭರವಸೆ ಇದೆ. ಸಚಿವ ಸಂಪುಟ ಬದಲಾವಣೆ ಅಥವಾ ವಿಸ್ತರಣೆ ಯಾವಾಗ ಎಂಬುದು ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net