

ಹಾವೇರಿ: ಹಾನಗಲ್ಲ ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ ಹಲ್ಲೆ ಮಾಡಿದ ಆರೋಪದ ಪ್ರಕರಣದ ದೋಷಾರೋಪಣ ಪಟ್ಟಿ ಸಲ್ಲಿಸುವಂತೆ ಒತ್ತಾಯಿಸಿ ವಕೀಲ ಶಿವು ತಳವಾರ ಹಾಗೂ ಇತರರು ನಗರದ ಗ್ರಾಮೀಣ ಪೊಲೀಸ್ ಠಾಣೆ ಎದುರು ಮಂಗಳವಾರ ಪ್ರತಿಭಟಿಸಿದರು.
ಆರು ತಿಂಗಳಾದರೂ ಪ್ರಕರಣದ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿಲ್ಲ. ಈ ಕೂಡಲೇ ದೋಷಾರೋಪಣ ಪಟ್ಟಿ ಸಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ ಆಗಮಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.