ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಪ್ರಸಕ್ತ 2023ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಅರ್ಹ ಸಹಕಾರಿಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.
ಕನಿಷ್ಠ 10 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ರಂಗಗಳಲ್ಲಿ ವಿಶಿಷ್ಟವಾದ ಸಾಧನೆ ಮಾಡಿದ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ದುರ್ಬಲ ವರ್ಗದ ಏಳ್ಗೆಗಾಗಿ ಸಹಕಾರಿ ಕ್ಷೇತ್ರದ ಮೂಲಕ ಸೇವೆ ಸಲ್ಲಿಸಿದ ಅರ್ಹ ಸಹಕಾರಿಗಳು ತಮ್ಮ ವೈಯಕ್ತಿಕ ಪರಿಚಯದೊಂದಿಗೆ ನಾಲ್ಕು ಭಾವಚಿತ್ರಗಳನ್ನು ಲಗತ್ತಿಸಿದ ಪ್ರಸ್ತಾವನೆಯನ್ನು ಅ.12ರ ಒಳಗಾಗಿ ಜಿಲ್ಲಾ ಸಹಕಾರಿ ಯೂನಿಯನ್, ರೈಲ್ವೆ ಸ್ಟೇಷನ್ ರೋಡ್, ಶಿವಬಸವ ನಗರ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಸಹಕಾರಿ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net