ಸಹಕಾರ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಹಾವೇರಿ: 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಅರ್ಹ ಸಹಕಾರಿ ರಂಗದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
10 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ರಂಗಗಳಲ್ಲಿ ವಿಶಿಷ್ಟವಾದ ಸಾಧನೆ ಮಾಡಿದ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ದುರ್ಬಲ ವರ್ಗದ ಏಳ್ಗೆಗಾಗಿ ಸಹಕಾರಿ ಕ್ಷೇತ್ರದ ಮೂಲಕ ಸೇವೆ ಸಲ್ಲಿಸಿದ ಅರ್ಹ ಸಹಕಾರಿಗಳು ತಮ್ಮ ವೈಯಕ್ತಿಕ ಪರಿಚಯೊದಂದಿಗೆ ನಾಲ್ಕು ಭಾವಚಿತ್ರಗಳನ್ನು ಲಗತ್ತಿಸಿದ ಅರ್ಜಿಯನ್ನು ಅ.25ರೊಳಗೆ ಜಿಲ್ಲಾ ಸಹಕಾರ ಯೂನಿಯನ್, ರೈಲ್ವೆ ಸ್ಟೇಷನ್ ರೋಡ್, ಶಿವಬಸವ ನಗರ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net