ಚಕೋರ ವೇದಿಕೆಗೆ ಶೇಖರ, ಮಾರುತಿ ಆಯ್ಕೆ

Published on

ಹಾವೇರಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಿಲ್ಲಾ ‘ಚಕೋರ’ ವೇದಿಕೆಯ ನೂತನ ಸಂಚಾಲಕರನ್ನಾಗಿ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಉಪನ್ಯಾಸಕ ಶೇಖರ ಭಜಂತ್ರಿ ಹಾಗೂ ಯುವ ಲೇಖಕ ಮಾರುತಿ ತಳವಾರ ಅವರನ್ನು ಆಯ್ಕೆ ಮಾಡಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಆದೇಶ ಹೊರಡಿಸಿದ್ದಾರೆ.

ಶೇಖರ ಭಜಂತ್ರಿ ಭಾವಸಂಗಮ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಸ್ಥಾಪಿಸಿ ಸಾಹಿತ್ಯಿಕ ಚಟುವಟಿಕೆಯಲ್ಲಿ ತೊಡಗಿದ್ದು, ರಾಣೆಬೆನ್ನೂರ ತಾಲೂಕಿನ ಮೆಡ್ಲೇರಿ ಗ್ರಾಮದ ಕ.ಸಾ.ಪ. ಮೆಡ್ಲೇರಿ ಗ್ರಾಮ ಘಟಕದ ಅಧ್ಯಕ್ಷರಾಗಿರುವ ಮಾರುತಿ ಸಾಹಿತ್ಯ, ಸಂಘಟನೆಯಲ್ಲಿ ನಿರತರಾಗಿದ್ದಾರೆ. ಇವರ ಸೇವೆ ಗುರುತಿಸಿ ಚಕೋರ ವೇದಿಕೆಗೆ ಸಂಚಾಲಕರನ್ನಾಗಿ ನೇಮಿಸಿ, ವೇದಿಕೆಯ ಮೂಲಕ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲೆ, ಕಾಲೇಜು ಮತ್ತು ಸಂಘ-ಸಂಸ್ಥೆಗಳಲ್ಲಿ ಸಾಹಿತ್ಯ ಕಾರ್ಯಕ್ರಮಗಳಾದ ಉಪನ್ಯಾಸ, ಕವಿಗೋಷ್ಠಿ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಸೂಚಿಸಲಾಗಿದೆ. ಚಕೋರ ವೇದಿಕೆಯ ಅಧ್ಯಕ್ಷ ಮತ್ತು ಸದಸ್ಯ ಸಂಚಾಲಕ ಡಾ.ಮಲ್ಲಿಕಾರ್ಜುನ ಮಾನ್ಪಡೆ ಜತೆಯಲ್ಲಿ ಅಕಾಡೆಮಿಯ ಘನತೆಗೆ ತಕ್ಕಂತೆ ಕಾರ್ಯಕ್ರಮಗಳನ್ನು ನಿರ್ವಹಿಸಿಕೊಂಡು ಹೋಗಲು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net