ಗೊಟಗೋಡಿಯಲ್ಲಿ 3 ದಿನಗಳ ಕಮ್ಮಟ ಏ.21ರಿಂದ; ಆಸಕ್ತರಿಂದ ಅರ್ಜಿ ಆಹ್ವಾನ

Published on

ಹಾವೇರಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಏಪ್ರಿಲ್ 21, 22 ಮತ್ತು 23 ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ‘ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು’ ಎಂಬ ವಿಷಯದಡಿ 3 ದಿನಗಳ ಕಮ್ಮಟ ಆಯೋಜಿಸಲಾಗಿದೆ.

20ರಿಂದ 45 ವರ್ಷದೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲ ಭಾಗದ ಆಸಕ್ತರು ಏ.5ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿhttp://karnatakasahithyaacademy.org ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net