

ಹಾವೇರಿ: ಇಲ್ಲಿನ ಅಶ್ವಿನಿ ನಗರದ ಶ್ರೀ ಶಿರಡಿ ಸಾಯಿಬಾಬಾ ನೂತನ ಮಂದಿರದಲ್ಲಿ ನ.30ರಂದು ಸಂಜೆ 6 ಗಂಟೆಗೆ ಶ್ರೀ ಸಾಯಿಬಾಬಾರ ಪ್ರಥಮ ಕಾರ್ತಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಭಕ್ತರು ಕಾರ್ತಿಕೋತ್ಸವದಲ್ಲಿ ಭಾಗವಹಿಸಿ ಬಾಬಾರ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಟ್ರಸ್ಟ್ ಅಧ್ಯಕ್ಷ ಜಗದೀಶ ಬೆಟಗೇರಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.