ಹಾವೇರಿ: ಜಿಲ್ಲೆಯ ಸಖಿ ಒನ್ ಸ್ಟಾಪ್ ಸೆಂಟರ್ ಸಮರ್ಪಕ ನಿರ್ವಹಣೆಗಾಗಿ ಖಾಲಿ ಇರುವ ಕೇಂದ್ರ ಆಡಳಿತಗಾರ ಹುದ್ದೆಗೆ ಮಹಿಳಾ ಅಭ್ಯರ್ಥಿಯ ತಾತ್ಕಾಲಿಕ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 24ರಿಂದ 35 ವರ್ಷದೊಳಗಿರಬೇಕು. ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು. ಕಾರ್ಯಾಗಾರ, ತರಬೇತಿಗಳಿಗಾಗಿ ಬೆಂಗಳೂರು ಹಾಗೂ ದೆಹಲಿಗೆ ಪ್ರಯಾಣಿಸಲು ಸಿದ್ಧರಿರಬೇಕು. ಆಯ್ಕೆ ನಂತರ 24/7 ಕರ್ತವ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ. ಟಾಸ್ಕ್ ಫೋರ್ಸ್ ಸಮಿತಿ ನಿರ್ಣಯವೇ ಅಂತಿಮವಾಗಿರುತ್ತದೆ.
ಜಿಲ್ಲೆಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಒಂದು ವೇಳೆ ಸ್ಥಳೀಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಬೇರೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
ನಿಗದಿತ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವುಳ್ಳ ಸ್ಥಳೀಯ ಅರ್ಹ ಅಭ್ಯರ್ಥಿಗಳು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಈ ವಿಳಾಸದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿ.30ರೊಳಗಾಗಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.